Pages

Saturday, April 5, 2008

ನಿನ್ನಿಂದಲೇ ನಿನ್ನಿಂದಲೇ.......

ಚಿತ್ರ: ಮಿಲನ
ಸಂಗೀತ: ಮನೋಮೂರ್ತಿ
ಸಾಹಿತ್ಯ: ಜಯಂತ್ ಕಾಯ್ಕಿಣಿ
ಹಾಡಿದವರು: ಸೋನು ನಿಗಮ್

ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ
ನಿನ್ನಿಂದಲೇ ನಿನ್ನಿಂದಲೇ ಮನಸಿಂದು ಕುಣಿದಾಡಿದೆ
ಎದೆಯಲ್ಲಿ ಸಿಹಿಯಾದ ಕೋಲಾಹಲ
ನನ್ನೆದುರಲ್ಲಿ ನೀ ಹೀಗೆ ಬಂದಾಗಲೇ
ನಿನ್ನ ತುಟಿಯಲ್ಲಿ ನಗುವಾಗುವ ಹಂಬಲ
ನಾ ನಿಂತಲ್ಲೇ ಹಾಳಾದೆ ನಿನ್ನಿಂದಲೇ...

ಇರುಳಲ್ಲಿ ಜ್ವರದಂತೆ ಕಾಡಿ ಈಗ
ಹಾಯಾಗಿ ನಿಂತಿರುವೆ ಸರಿಯೇನು
ಬೇಕಂತಲೇ ಮಾಡಿ ಏನೋ ಮೋಡಿ
ಇನ್ನೆಲ್ಲೋ ನೋಡುವ ಪರಿ ಏನು
ಮಾಯೆಗೆ ಮರುಳಿಗೆ ನಿನ್ನಿಂದ ಕಳೆ ಬಂದಿದೆ
ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ...

ಹೋದಲ್ಲಿ ಬಂದಲ್ಲಿ ಎಲ್ಲಾ ನಿನ್ನ
ಸೊಂಪಾದ ಚೆಲುವಿನ ಗುಣಗಾನ
ಕೇದಿಗೆ ಗರಿಯಂಥ ನಿನ್ನ ನೋಟ
ನನಗೇನೋ ಅಂದಂತೆ ಅನುಮಾನ
ಕಣ್ಣಿಂದಲೇ ಸದ್ದಿಲ್ಲದೆ ಮುದ್ದಾದ ಕರೆ ಬಂದಿದೆ
ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ...

1 comment:

Ramesh Chandra said...

VTU results for december jan 2018 has been announced, check here VTU results 2018